ವಕ್ಫ್ ಆಸ್ತಿ ಕುರಿತು ನೈಜ ವರದಿ ಸಂಗ್ರಹಿಸಲು ಬಿಜೆಪಿಯಿಂದ 3 ತಂಡ ರಚನೆ

Update: 2024-11-15 14:46 GMT

ಸಾಂದರ್ಭಿಕ ಚಿತ್ರ(PTI)

ಬೆಂಗಳೂರು : ‘ವಕ್ಫ್ ಆಸ್ತಿ’ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಬಂಡಾಯ ನಾಯಕರ ನೇತೃತ್ವದಲ್ಲಿ ಹೋರಾಟ ಘೋಷಣೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ‘ವಕ್ಫ್ ಆಸ್ತಿ ಕುರಿತು ನೈಜ ವರದಿ ಸಂಗ್ರಹಿಸಲು ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷವಾಕ್ತದಡಿಯಲ್ಲಿ ಮೂರು ತಂಡಗಳನ್ನು ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಪ್ರಹ್ಲಾದ್ ಜೋಶಿ, ಶ್ರೀರಾಮುಲು, ರಮೇಶ್ ಜಾರಕಿಹೊಳಿ ಸೇರಿದಂತೆ 12 ಮಂದಿ ಮುಖಂಡರು ಸಮಿತಿಯಲ್ಲಿದ್ದು, ಸಂಚಾಲಕರಾಗಿ ಪಿ.ರಾಜೀವ್ ಅವರನ್ನು ನೇಮಕ ಮಾಡಲಾಗಿದೆ.

ಚಾಮರಾಜನಗರ, ಮೈಸೂರು ನಗರ, ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಧ್ಯಯನಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಎರಡನೇ ತಂಡದಲ್ಲಿ ವಿಜಯಪುರ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರೂ ಇದ್ದಾರೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳ ಅಧ್ಯಯನಕ್ಕೆ ಮೂರನೇ ತಂಡ ರಚನೆ ಮಾಡಲಾಗಿದ್ದು, ತಂಡದದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿಗೂ ಪ್ರಾತಿನಿಧ್ಯ ಕಲ್ಪಿಸಲಾಗಿದೆ.

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News