ಡಿಸೆಂಬರ್ ನಲ್ಲಿ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 3340 ಪ್ರಯಾಣಿಕರಿಗೆ ದಂಡ

Update: 2024-01-18 16:26 GMT

 ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಎಸ್ಸಾರ್ಟಿಸಿ ಡಿಸೆಂಬರ್ ತಿಂಗಳಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,863 ವಾಹನಗಳನ್ನು ತನಿಖೆಗೊಳಪಡಿಸಿ 3,274 ಪ್ರಕರಣಗಳನ್ನು ಪತ್ತೆಹಚ್ಚಿ, 3,340 ಟಿಕೆಟ್ ರಹಿತ ಪ್ರಯಾಣಿಕರಿಂದ 5,39,548 ರೂ.ಗಳನ್ನು ದಂಡ ವಸೂಲಿ ಮಾಡಲಾಗಿದೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 77,577ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಆದುದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣ ಮಾಡಬೇಕು ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News