371(ಜೆ) ಅಡಿ ಉದ್ಯೋಗ ನೇಮಕಾತಿ | ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

Update: 2024-07-03 15:03 GMT

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಭಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ಸಂಪುಟ ಉಪ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ರಾಜ್ಯ ಲೋಕಸೇವಾ ಆಯೋಗ ಹಾಗೂ ರಾಜ್ಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟನೆ ವಿಷಯದಲ್ಲಿ ಪದೇ ಪದೇ ಗೊಂದಲಗಳು ಉದ್ಭವಿಸುತ್ತಿರುವುದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕೆಂದು ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಡಿ.ರಣದೀಪ್, ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್ ಕುಮಾರ್, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ, ರಾಜ್ಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News