ಶೇ.40 ಕಮಿಷನ್ ಜಾಹಿರಾತು ಪ್ರಕರಣ | ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಜಾಮೀನು
Update: 2024-06-01 06:28 GMT
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ.
ಬಿಜೆಪಿಯ ಕೇಶವ್ ಪ್ರಸಾದ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಜರಾಗಿದ್ದರು. ಈ ಮೊಕದ್ದಮೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶರು ಜಾಮೀನು ನೀಡಿ ಆದೇಶಿದ್ದಾರೆ.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ್ದ ಕೋರ್ಟ್ ಆರೋಪಿಗಳು ಖುದ್ದು ಹಾಜರಿಗೆ ಸಮನ್ಸ್ ನೀಡಿತ್ತು. ಹೀಗಾಗಿ ಡಿಕೆಶಿ, ಸಿದ್ದರಾಮಯ್ಯ ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ್ದಾರೆ.