ದಾವಣಗೆರೆ ಜಿಲ್ಲೆಯಲ್ಲಿ 414 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ

Update: 2023-10-23 06:29 GMT

ದಾವಣಗೆರೆ: ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆಗೆ ನೆರವಾಗುವ ಹಾಗೂ ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಗಳು ಹೇರಳ ಅನುದಾನ ನೀಡುತ್ತಿವೆ. ಆದರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕೆಲವೆಡೆ ಜಾಗವೇ ಸಿಗದಂತಾಗಿದೆ.

ಜಿಲ್ಲೆಯಲ್ಲಿ ಒಟ್ಟು 1771 ಅಂಗನವಾಡಿ ಕೇಂದ್ರಗಳಿವೆ. ಅವುಗಳ ಪೈಕಿ 1145 ಕೇಂದ್ರಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದ 414 ಕೇಂದ್ರಗಳಲ್ಲಿ ಕೆಲವು ಬಾಡಿಗೆ ಕಟ್ಟಡದಲ್ಲಿ, ಉಚಿತ ಕಟ್ಟಡ, ಸಮುದಾಯ ಭವನ, ಶಾಲೆಗಳಲ್ಲಿ ನಡೆಯುತ್ತವೆ. ಕಟ್ಟಡ ನಿರ್ಮಾಣಕ್ಕೆ ಕೇಂದ್ರ- ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಸಾಕಷ್ಟು ಅನುದಾನ ಬರುತ್ತಿದೆ. ಆದರೆ ಅದನ್ನು ಬಳಸಲು ಸಾಧ್ಯವಾಗದ ಪರಿಸ್ಥಿತಿಯಿದೆ. ಇದಕ್ಕೆ ಕಾರಣ ನಿವೇಶನ ಸಮಸ್ಯೆಯಾಗಿದೆ.

ಇದು ಸ್ವಂತ ಕಟ್ಟಡವಿಲ್ಲದ ಬಹುತೇಕ ಎಲ್ಲ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿ. ಅನುದಾನ ಇದ್ದರೂ ಅದು ಬಳಕೆಯಾಗದಿರುವುದು ಜಿಲ್ಲೆಯ ಜನರ ದೌರ್ಭಾಗ್ಯ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬಡ ಹಾಗೂ ಪುಟ್ಟ ಮಕ್ಕಳು ತೊಂದರೆ ಎದುರಿಸುವಂತಾಗಿದೆ.

ಅಂಗನವಾಡಿ ಕೇಂದ್ರಗಳಿಗೆ ಜಾಗವನ್ನು ಆಯಾ ಸ್ಥಳೀಯ ಸಂಸ್ಥೆಗಳು ಸಭೆಯಲ್ಲಿ ಠರಾವು ಪಾಸ್ ಮಾಡಿ ನೀಡಬೇಕು. ಆದರೆ, ಈ ಬಗ್ಗೆ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಅಷ್ಟೊಂದು ಆಸಕ್ತಿ ತೋರುತ್ತಿಲ್ಲ. ಪರಿಣಾಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗುರುತಿಸಿದ ಜಾಗವನ್ನೂ ಸ್ಥಳೀಯ ಆಡಳಿತಗಳು ನೀಡುತ್ತಿಲ್ಲ. ಈ ವಿಚಾರದಲ್ಲಿ ಸ್ಥಳೀಯ ಜನಪತ್ರಿನಿಧಿಗಳು ರಾಜಕೀಯ ಮಾಡುತ್ತಿದ್ದು ಸಮಸ್ಯೆಗೆ ಪರಿಹಾರವೇ ಸಿಗದಾಗಿದೆ. ಶಾಸಕ, ಸಂಸದರು ಈ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪಿಸಿದ್ದಾರೆ.

ʼದಾವಣಗೆರೆ ಜಿಲ್ಲೆಯಲ್ಲಿ 1771 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 1145 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ, 414 ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. 90 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಹಂತದಲ್ಲಿವೆ. ಇನ್ನು 72 ನಿವೇಶನಗಳು ಇದ್ದು, ಉಳಿದವುಗಳಿಗೆ ನಿವೇಶನ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುತ್ತೇವೆʼ

-ವಾಸಂತಿ ಉಪ್ಪಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪನಿರ್ದೇಶಕಿ.

--------------------------------------------

ರಂಗಮಂದಿರ. ಗ್ರಾಮಗಳಲ್ಲಿ ದೇವಸ್ಥಾನದಲ್ಲಿ ಅಂಗನವಾಡಿ ನಡೆಸುತ್ತಿದ್ದಾರೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ಹೊಂದಬೇಕಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕು. ಬಾಡಿಗೆ ಕಟ್ಟಡಗಳಲ್ಲಿರುವ ಕೇಂದ್ರಗಳಿಗೆ ಸ್ವಂತ ಕಟ್ಟಡ ಹೊಂದಲು ಸ್ಥಳೀಯ ಸಂಸ್ಥೆಗಳು ನಿವೇಶನ ನೀಡಲು ಮುಂದಾಗಬೇಕು. ಅಧಿಕಾರಿಗಳು ಕೂಡ ಸ್ಥಳೀಯ ಸಂಸ್ಥೆಗಳ ಮೇಲೆ ಒತ್ತಡ ಹೇರಬೇಕು.

ಅವರಗೆರೆ ವಾಸು, ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಫೆಡರೇಷನ್ ನ ರಾಜ್ಯ ಸಂಚಾಲಕ 

-------------------------------------------------

ʼಬಾಡಿಗೆ ಹಣ ಇನ್ನು ಬಂದಿಲ್ಲʼ

ʼಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟದಲ್ಲಿ ನಡೆಯುತ್ತಿವೆ. ಐದು ತಿಂಗಳಿಂದ ಬಾಡಿಗೆ ಹಣ ಬಂದಿಲ್ಲ. ಕಾಯ9ಕತೆ9ಯಾರಿಗೆ ಎರಡು ತಿಂಗಳಿಂದ ಗೌರವಧನ ಸಿಕ್ಕಿಲ್ಲʼ

ಎಸ್.ಎಸ್ ಮಲ್ಲಮ್ಮ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಫೆಡರೇಷನ್ ಜಿಲ್ಲಾ ಸಮಿತಿ 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ಪ್ರಕಾಶ್‌ ಎಚ್ ಎನ್

contributor

Similar News