ತೆಲಂಗಾಣ ಚುನಾವಣೆಗೆ 44 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಸಾಗಾಟ: ಬೆಳಗಾವಿಯಲ್ಲಿ ಜಪ್ತಿ

Update: 2023-10-23 07:44 GMT

ಬೆಳಗಾವಿ, ಅ.23: ತೆಲಂಗಾಣ ಚುನಾವಣೆಗೆ ಮತದಾರರ ಮನ ಗೆಲ್ಲಲ್ಲು ಹಣ, ಸೀರೆ, ಮದ್ಯ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಬೆಳಗಾವಿಯಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ತೆಲಂಗಾಣ ಚುನಾವಣೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎನ್ನಲಾಗಿದ್ದು, ಲಾರಿ ಸಮೇತ 44 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು ಚಾಲಕ ಪರಾರಿಯಾಗಿದ್ದಾನೆನ್ನಲಾಗಿದೆ.

21 ವಿವಿಧ ದುಬಾರಿ ಬ್ರ್ಯಾಂಡ್​ನ 250 ಬಾಕ್ಸ್ ಮದ್ಯ ವಶಕ್ಕೆ ಪಡೆಯಲಾಗಿದೆ. 44 ಲಕ್ಷ ಮೌಲ್ಯದ ಗೋವಾ ಮದ್ಯ, 20 ಲಕ್ಷ ಮೌಲ್ಯದ ಲಾರಿ ಸೇರಿ ಒಟ್ಟು 63 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News