ನಮ್ಮ 5 ʼಗ್ಯಾರಂಟಿʼ ಯೋಜನೆಗಳು ಸಾಮಾನ್ಯ ಜನರಿಗೆ; ಅಂಬಾನಿ - ಅದಾನಿಗೆ ಅಲ್ಲ: ಸಚಿವ ಕೃಷ್ಣ ಬೈರೇಗೌಡ

Update: 2023-10-21 11:45 GMT

ಚಾಮರಾಜನಗರ: ರಾಜ್ಯದ ಕಾಂಗ್ರೆಸ್ ಸರಕಾರದ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ - ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.

ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್​​​ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News