ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಮಂದಿ ಸಾವು
Update: 2023-09-05 06:36 GMT
ಬೆಂಗಳೂರು: ರಾಜ್ಯದಾದ್ಯಂತ 2023ನೇ ವರ್ಷದ ಮೊದಲ ಆರು ತಿಂಗಳುಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಒಟ್ಟು 5,830 ಮಂದಿ ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ಅಪಘಾತಕ್ಕೆ 1094 ಜನ ಮೃತಪಟ್ಟಿದ್ದರೆ ಜೂನ್‌ನಲ್ಲಿ 965 ಜುಲೈನಲ್ಲಿ 807 ಹಾಗೂ ಆಗಸ್ಟ್‌ನಲ್ಲಿ 795 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಸಾವಿಗೀಡಾದ ಹೆಚ್ಚಿನ ಜನರು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯವರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ ತಿಂಗಳಲ್ಲಿ 29, ಜೂನ್‌ನಲ್ಲಿ 28, ಜುಲೈನಲ್ಲಿ 8 ಮತ್ತು ಆಗಸ್ಟ್‌ನಲ್ಲಿ 6 ಜನ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.