5, 8 ಮತ್ತು 9ನೆ ತರಗತಿಗಳ ಮೌಲ್ಯಾಂಕನ ಪರೀಕ್ಷೆ : ವಿದ್ಯಾರ್ಥಿಗಳಿಗೆ ಉತ್ತರ ಹಾಳೆಯನ್ನು ನೀಡಲು ಮುಂದಾದ ಸರಕಾರ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಮಾಪನ-2 ಮೌಲ್ಯಾಂಕನ ಪರೀಕ್ಷೆಗೆ ಉತ್ತರ ಹಾಳೆಗಳನ್ನು ಇಲಾಖೆಯಿಂದ ಒದಗಿಸಲಾಗುತ್ತಿದೆ.
ಮೌಲ್ಯಾಂಕನಕ್ಕೆ ಪ್ರಶ್ನೆಪತ್ರಿಕೆಗಳನ್ನು ಮಂಡಳಿ ವತಿಯಿಂದ ಸರಬರಾಜು ಮಾಡುತ್ತಿದ್ದು, ವಿದ್ಯಾರ್ಥಿಗಳು ಉತ್ತರಿಸಬೇಕಾದ ಹಾಳೆಗಳೊಂದಿಗೆ ಮೌಲ್ಯಾಂಕನಕ್ಕೆ ಹಾಜರಾಗುವಂತೆ ಮಂಡಳಿಯ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು. ಇದು ಶೈಕ್ಷಣಿಕ ಕ್ಷೇತ್ರದಲ್ಲಿ ವಿವಾದವನ್ನು ಸೃಷ್ಟಿಸಿತ್ತು.
ಇದೀಗ ಹೈಕೋರ್ಟ್ ತೀರ್ಪಿನ ಬಳಿಕ 5, 8 ಮತ್ತು 9ನೆ ತರಗತಿಗಳ ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಮಾಪನ-2 ಮೌಲ್ಯಾಂಕನ ಪರೀಕ್ಷೆಯು ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗುತ್ತಿದ್ದು, ಪ್ರಸ್ತುತ ವಿದ್ಯಾರ್ಥಿಗಳು ಉತ್ತರಿಸಲು ಅವಶ್ಯಕವಿರುವ ಉತ್ತರ ಹಾಳೆಗಳನ್ನು ಇಲಾಖೆಯಿಂದ ಒದಗಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದೆ.