1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು, ಆ.10: ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ರಾಜ್ಯ ಸರಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈನಲ್ಲಿ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ ಪ್ರಸಕ್ತ ವರ್ಷದಲ್ಲಿ ಎಲ್‌ಕೆಜಿ ಕಲಿಯಲು ಅನುಮತಿಸಬೇಕು ಎಂದು ಕೋರಿ ಬೆಂಗಳೂರಿನ ಅನಿಕೇತ್ (ಮಗುವಿನ ತಂದೆ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾಮಾಡಿದೆ.
ಅಲ್ಲದೆ, ಮಾರ್ಗಸೂಚಿಯ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.