ಟಿಕೆಟ್ ಇಲ್ಲದೆ ಪ್ರಯಾಣ | ಸೆಪ್ಟಂಬರ್ ತಿಂಗಳಿನಲ್ಲಿ 6.23 ಲಕ್ಷ ದಂಡ ವಸೂಲಿ ಮಾಡಿದ ಕೆಎಸ್ಸಾರ್ಟಿಸಿ
Update: 2024-11-06 15:09 GMT
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಆರೋಪದ ಮೇಲೆ 3,706 ಮಂದಿ ಟಿಕೆಟ್ ರಹಿತ ಪ್ರಯಾಣಿಕರಿಂದ 6.23ಲಕ್ಷ ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಸೆಪ್ಟಂಬರ್ ತಿಂಗಳಿನಲ್ಲಿ ಸಂಸ್ಥೆಯಲ್ಲಿ ಸಂಚರಿಸುವ 42 ಸಾವಿರಕ್ಕೂ ಅಧಿಕ ವಾಹನಗಳನ್ನು ತಪಾಸಣೆ ನಡೆಸಿದ್ದು, 3,584 ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 3,706 ಮಂದಿ ಪ್ರಯಾಣಿಕರಿಂದ 6,23,805 ರೂ. ದಂಡ ವಸೂಲಿ ಮಾಡಲಾಗಿದೆ. ಇದೇ ವೇಳೆ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 81,057 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣ ಮಾಡಬೇಕು ಎಂದು ಕೆಎಸ್ಸಾರ್ಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.