ನೀವು ಪ್ರಾಮಾಣಿಕರಿದ್ದರೆ ಸಿಬಿಐ ತನಿಖೆಗೆ ಭಯ ಏಕೆ?: ಸಿದ್ದರಾಮಯ್ಯಗೆ ಸಿ.ಟಿ. ರವಿ ಪ್ರಶ್ನೆ

Update: 2024-09-27 18:08 GMT

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯರ ಸಾರ್ವಜನಿಕ ಜೀವನ ಪರಿಶುದ್ಧವಲ್ಲ, ತನ್ನ ಭ್ರಷ್ಟಾಚಾರ ಗೊತ್ತಾಗಬಾರದೆಂಬ ಕಾರಣಕ್ಕಾಗಿಯೇ ಪೂರ್ವತಯಾರಿ ಮಾಡಿಕೊಂಡು ಭ್ರಷ್ಟಾಚಾರ ಮಾಡುವ ಒಬ್ಬ ಕ್ರಿಮಿನಲ್ ಭ್ರಷ್ಟ ರಾಜಕಾರಣಿ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಆರೋಪಿಸಿದರು.

ಶುಕ್ರವಾರ ವಿಧಾನಸೌಧದಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರ ವಿರುದ್ಧ 65ಕ್ಕೂ ಪ್ರಕರಣಗಳ ದೂರು ಸಲ್ಲಿಕೆಯಾಗಿವೆ. ಆ ದೂರುಗಳ ಸತ್ಯಾಸತ್ಯತೆ ಹೊರಕ್ಕೆ ಬರಬಾರದೆಂದು ಲೋಕಾಯುಕ್ತವನ್ನು ದುರ್ಬಲಗೊಳಿಸಿ, ಎಸಿಬಿ ರಚನೆ ಮಾಡಿಕೊಂಡು 15ಕ್ಕೂ ಹೆಚ್ಚು ಪ್ರಕರಣಗಳಿಗೆ ತನ್ನ ಅಧೀನದ ಎಸಿಬಿಯಲ್ಲಿ ಕ್ಲೀನ್‍ಚಿಟ್ ಪಡೆದಿದ್ದಾರೆ ಎಂದು ದೂರಿದರು.

ನೀವು ಪ್ರಾಮಾಣಿಕರಿದ್ದರೆ ನಿಮಗೆ ಸಿಬಿಐ ತನಿಖೆ ಮಾಡಿದರೆ ಭಯ ಏಕೆ? ನೀವು ಮತ್ತು ನಿಮ್ಮ ಸರಕಾರ ಪರಮಭ್ರಷ್ಟ ಸರಕಾರ ಎಂಬುದನ್ನು ನಿಮ್ಮ ನಿಲುವೇ ತೋರಿಸುತ್ತದೆ. ಭ್ರಷ್ಟಾಚಾರದ ಮುಖವಾಡ ಹೊರಬೀಳುವ ಭಯದಿಂದ ಸಿಬಿಐ ತನಿಖೆ ಹಿಂಪಡೆಯುವ ನಿರ್ಣಯ ಮಾಡಿದ್ದಾರೆ. ಇದು ಸಂವಿಧಾನ ವಿರೋಧಿ ಮತ್ತು ಭ್ರಷ್ಟರು ಮಾತ್ರ ಮಾಡುವ ಕೆಲಸ ಎಂದು ಆಕ್ಷೇಪಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News