ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ ಅವ್ಯವಹಾರ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ ಭೈರತಿ ಸುರೇಶ್

Update: 2023-12-12 22:33 IST
ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ ಅವ್ಯವಹಾರ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ ಭೈರತಿ ಸುರೇಶ್
  • whatsapp icon

ಬೆಳಗಾವಿ: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಡಾವಣೆ ಹಂಚಿಕೆ ವಿಚಾರಣೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ ಸಂಬಂಧ ಜಿಲ್ಲಾಕಾರಿಗಳಿಂದ ವರದಿ ಬಂದ ಬೆನ್ನಲ್ಲೇ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಮಂಗಳವಾರ ಪರಿಷತ್ತಿನ ಪ್ರಶ್ನೋತ್ತರದ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಸುಧಾಕರ್ ಪ್ರಶ್ನೆಗೆ ಉತ್ತರಿಸಿದ ಅವರು, 2019 ರಿಂದ 2023ರ ವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 467 ಬಡಾವಣೆಗಳಿಗೆ ವಿನ್ಯಾಸ ನಕ್ಷೆ ಅನುಮೋದನೆ ನೀಡಲಾಗಿದೆ. ಹೀಗೆ ನೀಡಲಾಗಿರುವ ಬಡಾವಣೆಯಲ್ಲಿ ಸಾಕಷ್ಟು ದುರುಪಯೋಗವಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ವಿಚಾರಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಪಾಲಿಕೆ ಆಯುಕ್ತರು ಮತ್ತು ಜಿಲ್ಲಾಕಾರಿಗಳಿಗೆ ಸುದೀರ್ಘವಾದ ವರದಿ ನೀಡಬೇಕೆಂದು ಸೂಚನೆ ಕೊಡಲಾಗಿತ್ತು ಎಂದರು.

ಕಳೆದ ತಿಂಗಳು ಮೈಸೂರು ಜಿಲ್ಲಾಧಿಕಾರಿಗಳು ಒಂದು ವರದಿಯನ್ನು ನೀಡಿದ್ದರು. ಆದರೆ ವರದಿಯು ಸಂಪೂರ್ಣವಾದ ಮಾಹಿತಿಯನ್ನು ಒಳಗೊಳ್ಳದೆ ಅಪೂರ್ಣವಾಗಿ ಇದ್ದಿದ್ದರಿಂದ ಪುನಃ ನಮ್ಮ ಇಲಾಖಾ ವತಿಯಿಂದ ಪತ್ರ ಬರೆಯಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಅಂತಿಮ ವರದಿ ಬರಲಿದ್ದು, ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸುವುದಾಗಿ ಸಚಿವರು ನುಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News