ಬಿಎಂಟಿಸಿ ಬಸ್‌ ಹರಿದು ತಂದೆಯೊಂದಿಗೆ ಶಾಲೆಗೆ ಹೋಗುತ್ತಿದ್ದ ನಾಲ್ಕು ವರ್ಷದ ಮಗು ಮೃತ್ಯು

Update: 2023-08-16 11:21 GMT

ಪೂರ್ವಿ ರಾವ್- ಮೃತ ಮಗು

ಬೆಂಗಳೂರು, ಆ.16: ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ ಮಗು ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಎಂಬುವವರು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರಸನ್ನ ದ್ವಿಚಕ್ರ ವಾಹನದ ಎಡಬದಿಗೆ ಬಿದ್ದರೆ ಪೂರ್ವಿ ಬಲಬದಿ ಬಿದ್ದಿದ್ದಾರೆ. ಇದೇ ವೇಳೆ ಬಸ್ ಪೂರ್ವಿ ಮೇಲೆ ಹರಿದುಹೋಗಿದೆ. ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News