ರೈತರಿಗೆ ನ್ಯಾಯ ಕೊಡದಿರುವ ಸರಕಾರ ಬಹಳ ದಿನ ಉಳಿಯುವುದಿಲ್ಲ: ಬಸವರಾಜ ಬೊಮ್ಮಾಯಿ

Update: 2024-01-09 09:37 GMT

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸರಕಾರ ರೈತರಿಗೆ ಪರಿಹಾರ ನೀಡದೇ ರಾಜಕೀಯ ಮಾಡುತ್ತ ಕಾಲಹರಣ ಮಾಡುತ್ತಿದೆ. ರೈತರಿಗೆ ನ್ಯಾಯ ಕೊಡದಿರುವ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ತೀವ್ರ ಬರದ ಹಿನ್ನೆಲೆಯಲ್ಲಿ ರೈತರಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ನೀಡಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ ಬಿಜೆಪಿ ನಿಯೋಗ  ರಾಜ್ಯಪಾಲರನ್ನು ಭೇಟಿ ಮಾಡಿ ನಂತರ ಮಾತನಾಡಿದ ಅವರು, ಬರ, ಪ್ರವಾಹ ಬಂದರೆ ಜನ ಸಂಕಷ್ಟದಲ್ಲಿ ಇದ್ದಾಗ ಸರಕಾರ ಧಾವಿಸಿ ಸಹಾಯ ಮಾಡಿದರೆ ಅದು ಜೀವಂತ ಇದ್ದಂತೆ. ಸರಕಾರ ರೈತರ ಕಡೆ ನೋಡದಿದ್ದರೆ ಅದು ಸತ್ತಂತೆ ಎಂದರು.

ರಾಜ್ಯ ಸರಕಾರ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ 18000 ಕೋಟಿ ರೂ. ನೀಡುವಂತೆ ಮನವಿ ಮಾಡಿದೆ. ಆದರೆ, ನಿವು ಕೇವಲ 105 ಕೋಟಿ ಬಿಡುಗಡೆ ಮಾಡಿದ್ದೀರಿ, ಅದು ಕೇವಲ ಶೇಕಡಾ 1% ಕೂಡ ಆಗುವುದಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುಂಚೆಯೇ ಪ್ರತಿ ಹೆಕ್ಟೇರ್ ಗೆ 2000 ರೂ ಬೆಳೆ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಅಧಿವೇಶನ ಮುಗಿದು ಒಂದು ತಿಂಗಳು ಕಳೆಯುತ್ತಿದ್ದರೂ, ಹಣ ಬಿಡುಗಡೆ ಮಾಡದೆ ಆಧಾರ್ ಲಿಂಕ್ ಮಾಡುವ ಕಥೆ ಹೇಳುತ್ತಾರೆ. ನಮ್ಮ ಸರಕಾರದ ಅವಧಿಯಲ್ಲಿಯೇ ಫ್ರುಟ್ ಸಾಪ್ಟ್ ವೇರ್ ನಲ್ಲಿ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಸರಕಾರದಿಂದಲೂ ಪರಿಹಾರದ ಹಣ ಬಿಡುಗಡೆಯಾಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರಕಾರ ಮೂರು ತಿಂಗಳಿಗೊಮ್ಮೆ ಇಡೀ ದೇಶಕ್ಕೆ ಎನ್ ಡಿ ಆರ್ ಎಫ್ ಹಣ ಬಿಡುಗಡೆ ಮಾಡುತ್ತದೆ ಎಂದರು.

ಹಣ ಎಷ್ಟಿದೆ ಬಹಿರಂಗ ಪಡಿಸಿ

ರಾಜ್ಯ ಸರಕಾರ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ನಿದಿಯಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿ ಎಷ್ಟು ಹಣ ಇದೆ ಎಂದು ಸರಕಾರ ಬಹಿರಂಗ ಪಡೆಸಬೇಕು ಎಂದು ಆಗ್ರಹಿಸಿದರು.

ಇನ್ನು ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಆತಂಕ ವ್ಯಕ್ತಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಸವರಾಜ ರಾಯರೆಡ್ಡಿ ಸತ್ಯ ಹೇಳಿದ್ದಾರೆ. ರಾಜ್ಯ ಸರಕಾರ ಪ್ರತಿದಿನ ಹಣಕಾಸಿನ ಸಮಸ್ಯೆ ಎದುರಿಸುತ್ತಿದೆ ಎನ್ನುವುದು ಅವರಿಗೆ ಗೊತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅದನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News