ಪತ್ನಿಯನ್ನು ಹತ್ಯೆಗೈದ ಪತಿ

Update: 2023-08-16 09:32 GMT

ನಾಗಮಂಗಲ (ಮಂಡ್ಯ) : ಪತ್ನಿಯನ್ನು ಪತಿ ಹತ್ಯೆ ಮಾಡಲಾಗಿರುವ ಘಟನೆ ಪಟ್ಟಣದಲ್ಲಿ ಬುಧವಾರ ಬೆಳಗ್ಗೆ ವರದಿಯಾಗಿದೆ.

ಟಿ.ಬಿ.ಬಡಾವಣೆಯ ಮುಳಕಟ್ಟೆ ರಸ್ತೆಯಲ್ಲಿರುವ ಮನೆಯಲ್ಲಿ ಮಧುಶ್ರೀ (25) ರನ್ನ ಬಲವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಪತಿ ಮಂಜುನಾಥ್ ಕೃತ್ಯ ಎಸಗಿ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆನ್ನಲಾಗಿದೆ.

ಕರಡಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಧುಶ್ರೀ ಮದುವೆ ಐದು ವರ್ಷಗಳ ಹಿಂದೆ ನಡೆದಿತ್ತು,ಇವರಿಗೆ ನಾಲ್ಕು ವರ್ಷದ ಮಗನಿದ್ದು, ಮಂಜುನಾಥ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದನು. ನಾಗಮಂಗಲ ಪಟ್ಟಣದ ಟಿ.ಬಿ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು, ಪತಿ ವಾರಕ್ಕೆ ಮನೆಗೆ ಬಂದು ಹೋಗುತ್ತಿದ್ದನು.ಇತ್ತೀಚಿಗೆ ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿದ್ದರಿಂದ ಆಗಾಗ್ಗೆ ಜಗಳ ನಡೆಯುತ್ತಿತ್ತು. ಸ್ವಾತಂತ್ರ್ಯೋತ್ಸವ ದಿನವಾದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ಮಂಜುನಾಥ್ ಮನೆಗೆ ಬಂದಿದ್ದು ಈ ವೇಳೆ ದಂಪತಿಗಳ ನಡುವೆ ಜಗಳ ನಡೆದಿದ್ದು.ಪತ್ನಿಯ ಹೊಟ್ಟೆ ಭಾಗಕ್ಕೆ ಬಲವಾದ ಆಯುಧದಿಂದ ಇರಿದು ಹತ್ಯೆ ಮಾಡಿ, ಮಗ ಮನ್ವಿತ್ ನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬುಧವಾರ ಬೆಳ್ಳಗ್ಗೆ ಮಧು ಎಂಬಾತ ಮನೆ ಬಳಿ ಹೋದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.

ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ನಿರಂಜನ್, ಅಶೋಕ್ ಕೃತ್ಯ ನಡೆದ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಾತನಾಡಿ, ಮಹಿಳೆಯ ಹೊಟ್ಟೆ ಭಾಗಕ್ಕೆ ಹರಿತವಾದ ಆಯುಧದಿಂದ ಇರಿದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ಕುರಿತು ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯನ್ನ ಪತ್ತೆ ಮಾಡಲಾಗುವುದೆಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News