ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರ ಊಟದಲ್ಲಿ ಹುಳ ಪತ್ತೆ ಪ್ರಕರಣ: FIR ದಾಖಲು
Update: 2023-10-24 13:49 GMT
ಬೆಂಗಳೂರು, ಅ.24: ವಾರದ ಹಿಂದಷ್ಟೇ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಮೊಸರನ್ನದಲ್ಲಿ ಹುಳು ಪತ್ತೆಯಾದ ಪ್ರಕರಣ ಸಂಬಂಧ, ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪೆನಿಯೊಂದಕ್ಕೆ ವಹಿಸಿತ್ತು.
ಆದರೆ, ಮಧ್ಯಾಹ್ನ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳ ವಾಟ್ಸಪ್ ಗ್ರೂಪ್‍ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಸಂಬಂಧ ಶುಚಿತ್ವ ಕಾಪಾಡದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಗೊತ್ತಾಗಿದೆ.