ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ಬಳಿ ಇದ್ದ ಹುಲಿ ಉಗುರು ಹೋಲುವ ಪೆಂಡೆಂಟ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

Update: 2023-10-27 08:54 GMT

ಅಧಿಕಾರಿಗಳಿಗೆ ಪೆಂಡೆಂಡ್‌ ಹಸ್ತಾಂತರಿಸುತ್ತರುವುದು

ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರ ಬಳಿ ಇದ್ದ ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃಣಾಲ್‌ ಹೆಬ್ಬಾಳಕರ್ ಅವರು ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿ ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೃಣಾಲ್‌ ಹೆಬ್ಬಾಳಕರ್ ಅವರ ಮನೆಗೆ ಆಗಮಿಸಿದ್ದರು. ಈ ವೇಳೆ ಆ ಪೆಂಡೆಂಟ್ ನ್ನು ಮೃಣಾಲ್ ಅವರು ಅಧಿಕಾರಿಗಳಿಗೆ ನೀಡಿದ್ದು, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ʼʼಸಾಮಾಜಿ ಮಾಧ್ಯಮಗಳಲ್ಲಿಹಾಗೂ ಮಾಧ್ಯಮಗಳಲ್ಲಿನ ವರದಿ ನೋಡಿ ಸಚಿವರ ಮೆನಗೆ ಬಂದಿದ್ದೇವೆ. ಮೃಣಾಲ್ ಅವರು ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ಈಗ ಪೆಂಡೆಂಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗುವುದು. ಪ್ರಯೋಗಾಲಯದಿಂದ‌ ವರದಿ ಬಂದ ನಂತರ ಈ ಕುರಿತು ಸ್ಪಷ್ಟವಾಗಲಿದೆ. ಈ ಬಗ್ಗೆ ವರದಿ ಬರೋಕೆ ಒಂದು ತಿಂಗಳು ಅವಧಿ ಬೇಕಾಗುತ್ತೆ. ಒಂದು ವೇಳೆ ಅದು ನಿಜವಾದ ಹುಲಿ ಉಗುರಾದಲ್ಲಿ‌ ಸೂಕ್ತ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾದ್ಯಮಗಳಿಗೆ ಮಾಹಿತಿ ನೀಡಿದರು. ‌

ʼʼನಿಜವಾದ ಹುಲಿ ಉಗುರಿನದ್ದಲ್ಲʼʼ

'ನನ್ನ ಮದುವೆಯ ಸಮಾರಂಭದಲ್ಲಿ ಆತ್ಮೀಯರು ನನಗೆ ಈ ಪೆಂಡೆಂಟ್ ಕಾಣಿಕೆ ನೀಡಿದ್ದಾರೆ. ಇದು ನಿಜವಾದ ಹುಲಿ ಉಗುರಿನದ್ದಲ್ಲ. ಪ್ಲಾಸ್ಟಿಕ್ ನಿಂದ ಮಾಡಿದ್ದು. ಈ ವಿಚಾರವಾಗಿ ಅರಣ್ಯಾಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ' ಎಂದು ಮೃಣಾಲ್ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News