ಉತ್ತರ ಪ್ರದೇಶ ಸರಕಾರದ ಹಿರಿಯ ಅಧಿಕಾರಿಗಳ ತಂಡದಿಂದ KSRTC ಕೇಂದ್ರ ಕಚೇರಿಗೆ ಭೇಟಿ

Update: 2023-09-13 06:21 GMT

ಬೆಂಗಳೂರು, ಸೆ.12: ಉತ್ತರ ಪ್ರದೇಶ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳ ತಂಡವು ಮಂಗಳವಾರ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿ, ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ಪಡೆದರು.

ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಗಳ ಸಲಹೆಗಾರರಾದ ಡಾ.ಕೆ.ವಿ ರಾಜು, ಎಲ್. ವೆಂಕಟೇಶ್ವರಲು ಭಾಆಸೇ, ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ ಹಾಗೂ ಡಾ. ಎಂ.ಕೆ.ಷಣ್ಮುಗ ಸುಂದರಂ, ಭಾಆಸೇ, ಪ್ರಧಾನ ಕಾರ್ಯದರ್ಶಿಗಳು, ವೃತ್ತಿಪರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಅಧಿಕಾರಿಗಳ ತಂಡವು ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಯುಪಿ ಸರಕಾರದ ತಂಡವು ನಿಗಮದ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷರನ್ನು ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿದರು. ಭಾಆಸೇ, ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಉಪಸ್ಥಿತರಿದ್ದರು.

ತಂಡವು, ನಂತರದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಠಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್ ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್ಸುಗಳ ಘಟಕ ಮತ್ತು ಚಾಜಿರ್ಂಗ್ ಸ್ಟೇಷನ್ ಗೆ ಭೇಟಿ ನೀಡಿ ಮಾಡಿದರು.

ಈ ಸಂದರ್ಭದಲ್ಲಿ ಭಾಆಸೇ, ನಿರ್ದೇಶಕ(ಸಿ&ಜಾ) ಸುಂದರೇಶ್ ಬಾಬು ಎಂ., ಹಾಗೂ ನಿಗಮದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News