ಅಬ್ದುಲ್ ಅಹದ್ ಬೆಂಗಳೂರು ಕ್ರೈಂ ಬ್ರ್ಯಾಂಚ್ ಡಿಸಿಪಿ

Update: 2023-09-05 14:16 GMT

ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್

ಬೆಂಗಳೂರು, ಸೆ.5: ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರಿನ ಸಿಟಿ ಕ್ರೈಂ ಬ್ರ್ಯಾಂಚ್ ಡಿಸಿಪಿಯಾಗಿ ವರ್ಗಾಯಿಸಲಾಗಿದೆ. ಮಂಗಳವಾರ ಬೆಳಗ್ಗೆ ಅವರನ್ನು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿದ ಆದೇಶ ಬಂದಿತ್ತು. ಸಂಜೆ ಆ ಆದೇಶದಲ್ಲಿ ತಿದ್ದುಪಡಿ ಮಾಡಿ ಸಿಸಿಬಿ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಅವರು ಈ ಹಿಂದೆ ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ, ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಯ ಬೆಂಗಳೂರು ಎಸ್ಪಿಯಾಗಿ, ಸಿ ಐ ಡಿ ಯಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಎಸ್ಪಿಯಾಗಿ ಹಾಗೂ ಕೆ ಎಸ್ ಆರ್ ಪಿ ಯಲ್ಲಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News