ಪಾಕಿಸ್ತಾನ ಝಿಂದಾಬಾದ್ ಘೋಷಣೆ ಆರೋಪ; ಎಫ್‌ಎಸ್‌ಎಲ್‌ ವರದಿ ಆಧರಿಸಿ ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್

Update: 2024-02-28 11:44 IST
ಪಾಕಿಸ್ತಾನ ಝಿಂದಾಬಾದ್ ಘೋಷಣೆ ಆರೋಪ; ಎಫ್‌ಎಸ್‌ಎಲ್‌  ವರದಿ ಆಧರಿಸಿ ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್
  • whatsapp icon

ಬೆಂಗಳೂರು ಫೆ.28: ಪಾಕಿಸ್ತಾನ ಝಿಂದಾಬಾದ್ ಎಂಬ ಘೋಷಣೆ ಕೂಗಿರುವ ಆರೋಪದ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಎಫ್‌ಎಸ್‌ಎಲ್‌ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟಿಂಗ್ ಮಾಡಿದ್ದಾರೆ. 'ನಾಸೀರ್ ಸಾಬ್ ಝಿಂದಾಬಾದ್' ಎಂದು ಹೇಳಲಾಗಿದೆ ಅಂತ ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು 'ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರು' ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.

ಈಗಾಗಲೇ ಎಫ್‌ಎಸ್‌ಎಲ್‌ನವರು ಪರೀಶೀಲನೆ ಕೈಗೊಂಡಿದ್ದಾರೆ. ಎಲ್ಲ ವೀಡಿಯೋ ತುಣುಕುಗಳನ್ನು ಸಂಗ್ರಹಿಸುತ್ತಿದ್ದಾರೆ. ಅಧಿಕೃತವಾಗಿ ಸುದ್ದಿ ವಾಹಿನಿಯಲ್ಲಿ ಮೊದಲು ಪ್ರಸಾರವಾದ ವೀಡಿಯೋಗಳನ್ನು ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಬಿಜೆಪಿಯವರು ಕೊಟ್ಟಿರುವ ದೂರನ್ನು ಸುಮೋಟೋ ಜತೆ ಸೇರಿಸಲಾಗುವುದು ಎಂದರು.

ಘಟನೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ಎಲ್ಲವನ್ನು ಪರಿಶೀಲನೆ ನಡೆಸಲಾಗುತ್ತಿವೆ. ಘೋಷಣೆ ಕೂಗಿದರು ಎನ್ನಲಾದ ಸ್ಥಳದಲ್ಲಿ ಯಾರಿದ್ದರು ಅನ್ನುವುದನ್ನು ಗುರುತಿಸಿ, ಅವರನ್ನು ವಿಚಾರಣೆ ನಡೆಸಲಾಗುತ್ತೆದೆ. ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿರುವುದು ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಏನೆಲ್ಲ ಕಾನೂನು ರೀತಿಯ ಕ್ರಮ ಜರುಗಿಸಬೇಕೋ ಅದು ಆಗುತ್ತದೆ. ಯಾವುದೇ ಕಾರಣಕ್ಕೂ ರಾಜಿಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯಾರೋ ಒಬ್ಬ ಮಾಡಿದ್ದಾನೆಂಬುವುದನ್ನು ಕಾಂಗ್ರೆಸ್ ಪಕ್ಷಕ್ಕೆ ತಳುಕು ಹಾಕುವುದು ಸರಿಯಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮಾಡಿ, ವರದಿ ಆಧರಿಸಿ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗುತ್ತದೆ. ಬಿಜೆಪಿ ಪಕ್ಷ ಶುರುವಾದಗಿನಿಂದಲೂ 'ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ' ಎಂದು ಹೇಳುತ್ತಲೇ ಇದ್ದಾರೆ. ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ ಎಂದು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News