ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿ ಖುಲಾಸೆ ಬಳಿಕ ಪಾಸ್ ಪೋರ್ಟ್ ಹಿಂದಿರುಗಿಸಬೇಕು: ಹೈಕೋರ್ಟ್

Update: 2023-07-05 15:32 GMT

ಬೆಂಗಳೂರು, ಜು.5: ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಯಾದ ಬಳಿಕ ಆತನಿಗೆ ಪಾಸ್ ಪೋರ್ಟ್ ಮರಳಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಬೆಂಗಳೂರಿನ ಫ್ರಾನ್ಸಿಸ್ ಝೇವಿಯರ್ ಕ್ರಾಸ್ಟೋ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯಪೀಠ ವಿಚಾರಣೆ ನಡೆಸಿತು.

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿ ಖುಲಾಸೆಯಾದರೆ, ಅದರ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಧಿಯ ಮುಗಿಯುವವರೆಗೆ ಕಾಯದೆ, ಅದೇ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯ ಪಾಸ್‍ ಪೋರ್ಟ್ ತಮ್ಮ ಬಳಿಯೇ ಇಟ್ಟುಕೊಳ್ಳಬಾರದು ಎಂದು ನ್ಯಾಯಪೀಠ ಆದೇಶಿಸಿದೆ.

ಅರ್ಜಿದಾರ ಫ್ರಾನ್ಸಿಸ್ ಝೇವಿಯರ್ ಗೆ ಪಾಸ್ ಪೋರ್ಟ್ ಮರಳಿಸುವಂತೆ ಸಂಬಂಧಿಸಿದ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿದ ನ್ಯಾಯಪೀಠ, ಪ್ರಕರಣದಲ್ಲಿ ಆರೋಪಿ ಖುಲಾಸೆಯಾಗಿದ್ದಾನೆ. ಆದರೆ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು ಎಂಬ ಕಾರಣಕ್ಕೆ ವಶಪಡಿಸಿಕೊಂಡಿದ್ದ ಪಾಸ್‍ ಪೋರ್ಟ್ ಅನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವಂತಿಲ್ಲ ಎಂದು ತಿಳಿಸಿದೆ.

2015ರಲ್ಲಿ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮುಂಬೈ ಮೂಲದ ಫ್ರಾನ್ಸಿಸ್ ಝೇವಿಯರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಆರೋಪಿಯಾಗಿದ್ದ ಆತನ ಪಾಸ್  ಪೋರ್ಟ್ ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು ವಶಕ್ಕೆ ಪಡೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News