ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ ಆರೋಪ: ಆನ್ ಲೈನ್ ಸೆಂಟರ್ ಜಪ್ತಿ

Update: 2023-07-28 06:04 GMT

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿಗಾಗಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ದರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ ಅರ್ಜಿಗೆ 250 ರೂ. ಹಣ ವಸೂಲಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಾಗಿದ್ದು, ಆನ್ ಲೈನ್ ಸೆಂಟರ್ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 

ಬೆಳಗಾವಿ ನಗರದ ಚವಾಟಗಲ್ಲಿಯಲ್ಲಿ ಜನತಾ ಆನ್ ಲೈನ್ ಸೆಂಟರ್ ನಡೆಸುತ್ತಿರುವ ಅದೃಶ್ ಆರ್.ಟಿ. ಹಾಗೂ ಮುತಗಾ ಗ್ರಾಮ ಒನ್ ಕೇಂದ್ರದ ಕಿರಣ್ ಚೌಗಲಾ ಎಂಬುವರ ವಿರುದ್ಧ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಚವಾಟಗಲ್ಲಿಯ ಜನತಾ ಆನ್ ಲೈನ್ ಕೇಂದ್ರದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಹಣ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಗುರುವಾರ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ್, ಬೆಳಗಾವಿ ತಹಶಿಲ್ದಾರ ಸಿದ್ದರಾಯ ಬೋಸಗಿ ಹಾಗೂ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಜಂತ್ರಿ ಅವರು ಜನತಾ ಆನ್ ಲೈನ್ ಕೇಂದ್ರದ ಮೇಲೆ ದಾಳಿ ನಡೆಸಿ ಅಕ್ರಮವನ್ನು ಪತ್ತೆ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News