ಕಪಾಳಮೋಕ್ಷ ಹೇಳಿಕೆ ; ಸಚಿವ ಶಿವರಾಜ್ ತಂಗಡಗಿ ವಿರುದ್ಧ ಪ್ರಕರಣ ದಾಖಲು

Update: 2024-03-27 06:27 GMT

Photo: fb.com/Shivarajtangadagi

ಬೆಂಗಳೂರು: ಮೋದಿ.. ಮೋದಿ.. ಕೂಗುವ ಎಂದು ಯುವಕರಿಗೆ ಕಪಾಳಮೋಕ್ಷ ಮಾಡಿ ಎಂಬ ಹೇಳಿಕೆ ನೀಡಿರುವ ಆರೋಪದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕಾರಟಗಿ ಪೊಲೀಸ್‌ ಠಾಣೆಯಲ್ಲಿ  ಎಫ್ ಐ ಆರ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಸಚಿವ ಶಿವರಾಜ್ ತಂಗಡಗಿ ಅವರು ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಮೋದಿ.. ಮೋದಿ.. ಕೂಗುವ ಎಂದು ಯುವಕರಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಎತ್ತಿಕಟ್ಟಿ, ದ್ವೇಷ ಭಾವನೆ ಮೂಡುವಂತೆ ಮಾಡಿ ಮತದಾರರ ಮೇಲೆ ಹಲ್ಲೆ ಮಾಡುವಂತೆ ಪ್ರಚೋದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News