ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

Update: 2023-12-11 14:30 GMT

ಬೆಳಗಾವಿ: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯೆ ರೂಪಕಲಾ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘2013ರಿಂದ 2023ರ ವರೆಗೂ 13,800 ಸಿಬ್ಬಂದಿ ನಿವೃತ್ತರಾಗಿದ್ದು, ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ. ತಾಂತ್ರಿಕ ಸಹಾಯಕರು, ಚಾಲಕ-ಕಂ-ನಿವಾರ್ಹಕರು ಸೇರಿದಂತೆ 9ಸಾವಿರ ಸಿಬ್ಬಂದಿ ನೇಮಕ ಮಾಡಲಾಗುತ್ತಿದ್ದು, 5ಸಾವಿರ ಹೊಸ ಬಸ್‍ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಕೋವಿಡ್ ಸಂಕಷ್ಟದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿದ್ದಂತಹ ಸಾರಿಗೆ ಸೇವೆಯ ಷೆಡ್ಯೂಲ್‍ಗಳನ್ನು ಮರು ಆರಂಭಿಸಲಾಗುವುದು. ಹಿಂದಿನ ಬಿಜೆಪಿ ಸರಕಾರ ಕೋವಿಡ್‍ಗಿಂತಲೂ ಮೊದಲೇ 3200 ಷೆಡ್ಯೂಲ್‍ಗಳನ್ನು ರದ್ದು ಮಾಡಿತ್ತು?. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿರುವುದು ಸರಕಾರದ ಗಮನದಲ್ಲಿದೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News