ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ

Update: 2024-10-15 14:57 GMT

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಅವರಿಗೆ ನಗರದ ಸೆಷನ್ಸ್‌ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ಜಾಮೀನು ಅರ್ಜಿಯನ್ನು ದರ್ಶನ್‌ ಪರ ವಕಾಲತ್ತು ವಹಿಸಿರುವ ಹೈಕೋರ್ಟ್‌ ವಕೀಲ ಎಸ್‌. ಸುನಿಲ್‌ ಕುಮಾರ್ ಮಂಗಳವಾರ ಮಧ್ಯಾಹ್ನ ಹೈಕೋರ್ಟ್‌ ಫೈಲಿಂಗ್ ವಿಭಾಗಕ್ಕೆ ಸಲ್ಲಿಸಿದರು.

300 ಪುಟಗಳಿಗೂ ಅಧಿಕವಾದ ದಸ್ತಾವೇಜಿನ ಈ ಅರ್ಜಿಗೆ ಎಫ್‌ಆರ್‌ ನಂಬರ್‌ ನೀಡಲಾಗಿದ್ದು ಅದರ ಕ್ರಿಮಿನಲ್‌ ಅರ್ಜಿ ಸಂಖ್ಯೆ ಇನ್ನಷ್ಟೇ ನಮೂದಾಗಬೇಕಿದೆ. ನಂತರವೇ ಅದು ನ್ಯಾಯಪೀಠದ ಮುಂದೆ ಬರಲಿದೆ ಅಥವಾ ಅವರ ಪರ ವಕೀಲರು ಮೆಮೊ ಮೂಲಕ ತುರ್ತು ವಿಚಾರಣೆಗೆ ಮನವಿ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News