ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ : ಅ.14ಕ್ಕೆ ತೀರ್ಪು

Update: 2024-10-10 18:32 IST
ರೇಣುಕಾಸ್ವಾಮಿ ಹತ್ಯೆ ಪ್ರಕರಣ |  ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ : ಅ.14ಕ್ಕೆ ತೀರ್ಪು

ನಟ ದರ್ಶನ್ 

  • whatsapp icon

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿದೆ.

ಜಾಮೀನು ಕೋರಿ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.

ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ. ಇದೇ ದಿನ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ, ಎ-8 ರವಿಶಂಕರ್ ಸೇರಿದಂತೆ ಉಳಿದ ಆರೋಪಿಗಳಿಗೆ ಜಾಮೀನು ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News