ಬೆಂಗಳೂರಿನಲ್ಲಿ ಹೆಚ್ಚುವರಿ 2500 ಸಿಸಿ ಕ್ಯಾಮೆರಾ: ಸಚಿವ ಜಿ.ಪರಮೇಶ್ವರ್
ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕರ ಸುರಕ್ಷತೆಗೆ ಹೆಚ್ಚುವರಿ 2500 ಸಾವಿರ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ 7,500 ಸಾವಿರ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಜತೆಗೆ ಕಮಾಂಡರ್ ಸೆಂಟರ್ ನಲ್ಲಿ ಇದರ ಕಾರ್ಯಾಚರಣೆಯನ್ನು ವೀಕ್ಷಣೆ ಮಾಡಲು ಸಿಬ್ಬಂದಿ ಮಾಡಲಾಗಿದೆ. ಇನ್ನೂ ಕೇಂದ್ರ ಸರಕಾರದ ನಿರ್ಭಯಾ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ 2,500 ಸಾವಿರ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದರು.
ಈ ಸಿಸಿ ಕ್ಯಾಮೆರಾಗಳು ಹೆಚ್ಚು ಗುಣಮಟ್ಟದಿಂದ ಕೂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ಕ್ಯಾಮೆರಾಗಳನ್ನು ವಾಣಿಜ್ಯ ಕಟ್ಟಡ, ಪ್ರದೇಶ, ಶಾಲಾ ಕಾಲೇಜು, ಸರಕಾರಿ ಕಟ್ಟಡ, ಬಸ್ ನಿಲ್ದಾಣಗಳಲ್ಲಿ ಅಳವಡಿಸಿ ವಿಶೇಷ ನಿಗಾ ಇರಿಸಲಾಗಿದೆ ಎಂದು ಅವರು ಹೇಳಿದರು.