ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ವರ್ಗಾವಣೆ

Update: 2024-06-07 15:07 GMT

ಬೆಂಗಳೂರು: ಸಹಕಾರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಹೊಣೆಗಾರಿಕೆ: ಮಂಜುನಾಥ್ ಪ್ರಸಾದ್ ಅವರಿಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಪಶುಸಂಗೋಪನೆ, ಪಶು ವಿಜ್ಞಾನ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರನ್ನು ಸಹಕಾರ ಇಲಾಖೆ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಸರಕಾರ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News