ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಸರಕಾರ ಆದೇಶ

Update: 2024-05-31 15:19 GMT

ಬೆಂಗಳೂರು: ನಗರಾಭಿವೃದ್ಧಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾ ಪ್ರಧಾನ ನಿರ್ದೇಶಕಿ ಹಾಗೂ ರಾಜ್ಯ ಮೇಲ್ಮನವಿ ನ್ಯಾಯಾಧೀಕರಣದ ಮುಖ್ಯಸ್ಥರಾಗಿದ್ದ ಮಂಜುಳಾ ವಿ. ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಸರಕಾರ ಆದೇಶ ಹೊರಡಿಸಿದೆ.

ಮಂಜುಳಾ ವಿ. ನಿವೃತ್ತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಅವರನ್ನು ಮೈಸೂರಿನಲ್ಲಿರುವ ಆಡಳಿತ ತರಬೇತಿ ಸಂಸ್ಥೆಯ ಮಹಾ ಪ್ರಧಾನ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ನಗರಾಭಿವೃದ್ಧಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಕೇಶ್ ಸಿಂಗ್ ನಿವೃತ್ತಿಯ ಹಿನ್ನೆಲೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್ ಅವರನ್ನು ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರಿಗೆ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.

ಮಂಜುಳಾ ವಿ. ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಎಂ.ಎಸ್. ಅವರನ್ನು ರಾಜ್ಯ ಮೇಲ್ಮನವಿ ನ್ಯಾಯಾಧೀಕರಣದ ಮುಖ್ಯಸ್ಥರ ಹುದ್ದೆಯಲ್ಲಿ ಪ್ರಭಾರದಲ್ಲಿ ಇರಿಸಿ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News