ಪತ್ರಿಕೆಗಳಲ್ಲಿ ಜಾಹೀರಾತು | ಕಾಂಗ್ರೆಸ್‌ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು

Update: 2024-04-19 14:14 GMT

ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಶುಕ್ರವಾರ ನಗರದ ನೃಪತುಂಗ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗವು, ಕನ್ನಡ ಮತ್ತು ಆಂಗ್ಲ ದೈನಂದಿನ ಪತ್ರಿಕೆಗಳಲ್ಲಿ ಮಾನಹಾನಿ ಮಾಡುವ ಜಾಹೀರಾತನ್ನು ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತಕ್ಷಣವೇ ಎಫ್‍ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ನಿರ್ದೇಶನ ಕೊಡುವಂತೆ ಆಗ್ರಹಿಸಿದೆ.

ನಿಯೋಗದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತು ಪಕ್ಷದ ಪ್ರಮುಖ ನಾಯಕರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News