ಬಿಜೆಪಿ ವಿರುದ್ಧ ಜಾಹೀರಾತು ವಿಚಾರ: ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

Update: 2024-02-23 12:41 GMT

ಬೆಂಗಳೂರು : ಬಿಜೆಪಿ ವಿರುದ್ಧ ಜಾಹೀರಾತು ವಿಚಾರ ಸಂಬಂಧ  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್‌‌ ಗಾಂಧಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 28ಕ್ಕೆ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನೀಡಿದೆ

ಶೇಕಡಾ 40%. ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿಯ ಪಕ್ಷದ ಪರವಾಗಿ ವಕೀಲ ವಿನೋದ್ ಕುಮಾರ್. ಎಂ. ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ 42 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

2023 ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ವಿರುದ್ಧ ಶೇಕಡಾ 40% ಕಮಿಷನ್ ಆರೋಪ, ವರ್ಗಾವಣೆ ದಂಧೆ ಸೇರಿದಂತೆ ಜಾಹೀರಾತು ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಮಾನಹಾನಿ ಆಗಿದೆ. ಯಾವುದೇ ದಾಖಲೆಗಳು ಇಲ್ಲದೆ ಕಾಂಗ್ರೆಸ್ ಆರೋಪ ಮಾಡಿದೆ. ಇದರಿಂದ ಬಿಜೆಪಿ ವರ್ಚಸ್ಸಿಗೆ ಧಕ್ಕೆ ಆಗಿದೆ ಎಂದು ಆರೋಪಿಸಲಾಗಿತ್ತು. ಈ ಮೊಕದ್ದಮೆ ವಿಚಾರಣೆ ನಡೆಸಿರುವ ಕೋರ್ಟ್ ಈಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರು ಮಾರ್ಚ್ 28 ಕ್ಕೆ ಹಾಜರಾಗಲು ಸೂಚನೆ ನೀಡಿದೆ‌.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News