ಜಿಎಸ್‌ಟಿ ಜಾರಿ ಬಳಿಕ ರಾಜ್ಯಗಳ ಸಂಪನ್ಮೂಲ ಕ್ರೋಢೀಕರಣದ ಅವಕಾಶ ಸೀಮಿತಗೊಂಡಿದೆ : ಸಿಎಂ ಸಿದ್ದರಾಮಯ್ಯ

Update: 2024-06-18 08:48 GMT

ಬೆಂಗಳೂರು : ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರೆ ಯಾವುದೇ ಆದಾಯ ಮೂಲಗಳು ಉಳಿದಿಲ್ಲ" ಎಂದು ತಿಳಿಸಿದ್ದಾರೆ.

ʼಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು, ಈ ಬದಲಾವಣೆಯ ನಂತರವೂ ದಕ್ಷಿಣ ಭಾರತದ ಇತರೆ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆʼ ಎಂದು ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News