ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಸ್ಪೀಕರ್ ಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ
Update: 2023-08-09 14:58 GMT
ಬೆಂಗಳೂರು, ಆ. 9: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ, ಅಖಿಲ ಭಾರತ ವೀರಶೈವ ಮಹಾಸಭಾ ಸ್ಪೀಕರ್ ಯು.ಟಿ.ಖಾದರ್ ಕಚೇರಿಗೆ ದೂರು ನೀಡಿದೆ.
ಬುಧವಾರ ಸ್ಪೀಕರ್ ಖಾದರ್ ಅವರನ್ನು ಭೇಟಿ ಮಾಡಿದ ಮಹಾಸಭಾ ಪದಾಧಿಕಾರಿಗಳು, ‘ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದೆ.
ಬಳಿಕ ಮಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ, ‘ಆರಗ ಜ್ಞಾನೇಂದ್ರ ಆ.1ರಂದು ಹೇಳಿಕೆ ನೀಡಿದ್ದು, ಮರುದಿನವೇ ಸದಾಶಿವನಗರ ಪೆÇಲೀಸರು ದೂರು ದಾಖಲಿಸಲಾಗಿದೆ. ಆದರೆ ಒಂದು ವಾರ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.