‘ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲʼ: ಪ್ರಕಾಶ್ ರಾಜ್ ವ್ಯಂಗ್ಯ

Update: 2024-06-08 09:03 GMT

ಬೆಂಗಳೂರು: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಚಿತ್ರನಟ ಪ್ರಕಾಶ್ ರಾಜ್ ಅವರು ವ್ಯಂಗ್ಯವಾಡಿದ್ದಾರೆ.

ಎನ್ ಡಿಎ ಸಭೆಯಲ್ಲಿ ಹಾಜರಾಗಿದ್ದ ಬಿಜೆಪಿ ನಾಯಕರ ಫೋಟೊವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಅವರು ‘ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ. ಖಚಿತವಾಗಿ ಏನೋ ಪಿತೂರಿ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಕಾಶ್ ರಾಜ್ ಅವರು, ‘ಕೇಂದ್ರದಲ್ಲಿ ಆತಂಕವಾದಿಗಳ ಸರ್ಕಾರ ಇದೆ. ಈಗ ಧರ್ಮ, ಜಾತಿ, ಮಂದಿರ ಹಾಗೂ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ. ಈ ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕು’ ಎಂದು ಹೇಳಿದ್ದರು.

ಕೇಂದ್ರ ಸರ್ಕಾರದಿಂದ ಯಾವುದೇ ಉದ್ಯೋಗದ ಗ್ಯಾರಂಟಿ ಇಲ್ಲ. ಆಗಾಗ ಬಿಟ್ಟಿ ಭಾಗ್ಯ ಕೊಟ್ಟು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ‘ಕೇಂದ್ರ ಸರ್ಕಾರದ ನಾಯಕರು ರಾಜರಂತೆ ಓಡಾಡುತ್ತಾರೆ. ಈಗಿನ ಮಹಾಪ್ರಭು ಕೈ ತೋರಿಸಿಕೊಂಡು ಪುಷ್ಪಕ ವಿಮಾನದಲ್ಲಿ ಓಡಾಡುತ್ತಿದ್ದಾರೆ. ನಮ್ಮನ್ನು ಸ್ಪರ್ಶಿಸದ ವ್ಯಕ್ತಿ ನಮ್ಮ ಸಮಸ್ಯೆ ಅರ್ಥ ಮಾಡಿಕೊಳ್ಳುತ್ತಾರಾ’ ಎಂದು ಪ್ರಧಾನಿ ಮೋದಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News