ಚುನಾವಣಾ ಅಕ್ರಮ ಆರೋಪ: ಎಚ್.ಡಿ.ರೇವಣ್ಣಗೆ ಹೈಕೋರ್ಟ್ ನಿಂದ ಸಮನ್ಸ್ ಜಾರಿ

Update: 2023-08-02 13:47 GMT

ಬೆಂಗಳೂರು, ಆ.2: ಹಣ ಮತ್ತು ಕೊಳಿ ಮಾಂಸ ಹಂಚಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮಾಜಿ ಸಚಿವ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್‍ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆ.4ಕ್ಕೆ ಮುಂದೂಡಿದೆ.

ರೇವಣ್ಣ ಅವರು ಚುನಾವಣೆ ಅಕ್ರಮದಿಂದ ಶಾಸಕರಾಗಿದ್ದು, ಅವರನ್ನು ಅನರ್ಹಗೊಳಿಸಿ ಮೂರನೆ ಸ್ಥಾನದಲ್ಲಿರುವ ತನ್ನನ್ನು ಶಾಸಕ ಎಂದು ಘೋಷಿಸುವಂತೆ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ. ಇದೇ ಕ್ಷೇತ್ರದಲ್ಲಿ ಎರಡನೆ ಸ್ಥಾನದಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೂ ಆರೋಪಿಸಲಾಗಿದೆ.

ಈ ಬೆಳವಣಿಗೆ ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 123ಕ್ಕೆ ವಿರುದ್ಧವಾಗಿದ್ದು, ಭ್ರಷ್ಟಾಚಾರ ನಡೆಸಿರುವುದು ತಿಳಿದು ಬರಲಿದೆ. ಈ ಬೆಳವಣಿಗೆಯನ್ನು ಅರ್ಜಿದಾರರು ಪ್ರಶ್ನಿಸಿದ ಸಂದರ್ಭದಲ್ಲಿ ರೇವಣ್ಣ ಅವರ ಪರ ಕಾರ್ಯನಿರ್ವಹಿಸುತ್ತಿದ್ದು, ಬೆಂಬಲಿಗರು ಕಾರನ್ನು ತಡೆದು ಗಾಜನ್ನು ಪುಡಿ ಪುಡಿ ಮಾಡಿದ್ದರು. ಅಷ್ಟೇ ಅಲ್ಲದೆ, ದೊಣ್ಣೆ ಕಲ್ಲುಗಳಿಂದ ಹೊಡೆದಿದ್ದರು. ಇದೇ ವೇಳೆ, ಅರ್ಜಿದಾರರ ಗನ್‍ಮ್ಯಾನ್ ಅಂಗ ರಕ್ಷಕನಿಗೆ ಹಲ್ಲೆ ನಡೆಸಲಾಗಿತ್ತು. ಘಟನೆ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಲ್ಲದೆ, ರೇವಣ್ಣ ಅವರು ಬ್ಯಾಂಕ್‍ನ ಖಾತೆಯಲ್ಲಿರುವ ಮೊತ್ತವನ್ನೂ ಸರಿಯಾದ ರೀತಿಯಲ್ಲಿ ಸೂಕ್ತ ರೀತಿಯಲ್ಲಿ ವಿವರಿಸಿಲ್ಲ. ಅಭ್ಯರ್ಥಿಯ ಮಾಹಿತಿ ಒದಗಿಸದೇ ಇರುವುದು ಕಾನೂನು ಬಾಹಿರವಾಗಲಿದೆ. ಹೀಗಾಗಿ, ಚುನಾವಣಾ ಅಧಿಕಾರಿಗಳು ನಾಮಪತ್ರ ತಿರಸ್ಕರಿಸಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News