ಸಾಮಾಜಿಕ ಜಾಲತಾಣದಲ್ಲಿ ಸ್ತ್ರೀ ನಿಂದನೆ ಆರೋಪ: ಸೂಲಿಬೆಲೆ ವಿರುದ್ಧ ದೂರು

Update: 2023-08-24 16:27 GMT

ಶಿವಮೊಗ್ಗ,ಆ.24: ಯುವ ಬ್ರಿಗೇಡ್ ನ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಗುರುವಾರ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದಾರೆ.

ಚಂದ್ರಯಾನ ಯಶಸ್ಸಿಗೆ ಪೂಜೆ ಮಾಡಿಸಿ ಫೊಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆಗೆ ಕೆಪಿಸಿಸಿ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಕಮೆಂಟ್ ಮಾಡಿದ್ದರು. ಸೂಲಿಬೆಲೆ ಪ್ರತಿಕ್ರಿಯೆ ನೀಡಿ ʼʼನಿನಗೇನು ಉರಿʼʼ ಎಂದು ಪೋಸ್ಟ್ ಮಾಡಿದ್ದು, ಇದು ಸ್ತ್ರೀ ನಿಂದನೆ ಎಂದು ಸೌಗಂಧಿಕ ಪೊಲೀಸ್ ದೂರು ನೀಡಿದ್ದಾರೆ.

ಎಲ್ಲರೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ 3 ಯಶಸ್ವಿಯಾಗಲಿ, ಫೋಟೋಗಳನ್ನ ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಸೌಗಂಧಿಕಾ ಕಾಮೆಂಟ್ ಮಾಡಿದ್ದರು. ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಾಮೆಂಟ್ ಹಾಕಿದ್ದರು. ಈ ಕಾರಣಕ್ಕೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾತ್ ಆರೋಪಿಸಿದ್ದಾರೆ.

ಕಾಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್ ಗಳಿಂದ ನನ್ನ ತೇಜೋವಧೆಗೆ ಪ್ರಯತ್ನಪಟ್ಟಿವೆ. ಆದರೆ ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ ಅಂತ ಸೌಗಂಧಿಕಾ ರಘುನಾಥ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News