ಉಪೇಂದ್ರ, ಸಚಿವ ಮಲ್ಲಿಕಾರ್ಜುನ್ ವಿರುದ್ಧ ಜಾತಿ ನಿಂದನೆ ಆರೋಪ | ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ʼʼಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಇಂತಹ ಹೇಳಿಕೆಗಳನ್ನು ನಾನು ಸಹಿಸಲ್ಲʼʼ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ʼʼಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಇಂತಹ ಹೇಳಿಕೆಗಳನ್ನು ನಾನು ಸಹಿಸಲ್ಲ. ಹೀಗೆ ಮಾತಾಡುವುದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ವಾ? ಸಚಿವರೇ ಆಗಲಿ ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಉಪೇಂದ್ರ, ಮಲ್ಲಿಕಾರ್ಜುನ ಕೇಸ್ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆʼʼ ಎಂದು ಸ್ಪಷ್ಟಪಡಿಸಿದರು.
ʼʼಸಚಿವ ಮಲ್ಲಿಕಾರ್ಜುನ ಏನ್ ಮಾತನಾಡಿದ್ದಾರೆ ಎನ್ನಲಾದ ವೀಡಿಯೊ ನೋಡಿಲ್ಲ. ಅವರ ವಿರುದ್ಧ ದೂರು ದಾಖಲಾಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪತ್ರಿಕೆಯಲ್ಲಿ ನಾನು ಓದಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇದ್ದು ಕೀಳಾಗಿ ಮಾತಾಡುವುದು ಸರಿಯಲ್ಲ. ಎರಡೂ ಪ್ರಕರಣಗಳ ಬಗ್ಗೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆʼʼ ಎಂದರು.