ಕೋವಿಡ್ ಹಗರಣ ಆರೋಪ | ಸಿಎಂ ಕೈ ಸೇರಿದ ತನಿಖಾ ಆಯೋಗದ ವರದಿ

Update: 2024-08-31 17:56 GMT

.

ಬೆಂಗಳೂರು : ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ʼಕೋವಿಡ್ ಹಗರಣʼ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗದಿಂದ ಕಾವೇರಿ ನಿವಾಸದಲ್ಲಿ ವರದಿ ಸಲ್ಲಿಕೆ ಮಾಡಲಾಗಿದೆ. 

ಲಾಕ್‌ಡೌನ್‌ ಆರಂಭವಾದ ದಿನದಿಂದ 2022ರ ಡಿಸೆಂಬರ್‌ 31ರವರೆಗಿನ ಅವಧಿಯಲ್ಲಿನ ಆರೋಪ, ನಿಯಮ ಉಲ್ಲಂಘನೆ, ಲೋಪಗಳ ಕುರಿತು ತನಿಖೆ ನಡೆಸಲು 2023ರ ಆ.26ರಂದು ಆಯೋಗವನ್ನು ನೇಮಿಸಲಾಗಿತ್ತು.  

ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News