ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಜೆಡಿಎಸ್ ಕಾರ್ಯಕರ್ತರಿಂದ ಜೀವ ಬೆದರಿಕೆ ಆರೋಪ: FIR ದಾಖಲು

Update: 2023-10-30 14:50 GMT

ಮೈಸೂರು,ಅ.30: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆದರಿಕೆ ಕರೆ ಮಾಡಿದ್ದ ಆರೋಪದ ಮೇಲೆ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಸಂಬಂಧ ಅಕ್ಟೋಬರ್ 28 ರಂದು ನಗರ ಪೊಲೀಸ್ ಆಯುಕ್ತರಿಗೆ ಎಂ. ಲಕ್ಷ್ಮಣ್ ದೂರು ದಾಖಲಿಸಿದ ಹಿನ್ನೆಲೆ ಕರೆ ಮಾಡಿ ಬೆದರಿಕೆ ಹಾಕಿದ್ದವರ ಮೇಲೆ ಎಫ್‍ಐಆರ್ ದಾಖಲಾಗಿದೆ.

ದೂರವಾಣಿ ಕರೆಯಲ್ಲಿ ಎಂ ಲಕ್ಷ್ಮಣ್‍ಗೆ ಜೆಡಿಎಸ್ ಕಾರ್ಯಕರ್ತನೋರ್ವ ಕುಮಾರಸ್ವಾಮಿ ಬಗ್ಗೆ ಮಾತನಾಡದಂತೆ ಬೆದರಿಕೆ ಹಾಕಿದ್ದು, ಎಂ.ಲಕ್ಷ್ಮಣ್ ಗೆ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಭದ್ರತೆ ಕೋರಿ ಎಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರ ಮೇಲೆ ಎಂ ಲಕ್ಷ್ಮಣ್ ದೂರು ನೀಡಿದ್ದರು. ದೂರು ದಾಖಲಿಸಿದ ಹಿನ್ನಲೆ ಹೆಚ್.ಡಿಕೆ ಆಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ.

ಠಾಣೆ ಎನ್.ಸಿ.ಆರ್ ನಂ 114/2023 ರಿತ್ಯಾ ದೂರು ದಾಖಲು ಮಾಡಿ ಠಾಣಾ ನ್ಯಾಯಾಲಯದ ಸಿಬ್ಬಂದಿ ಪಿ.ಸಿ 558 ರವರ ಮುಖೇನ 4 ನೇ ಜೆ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಿಂದ ಅನುಮತಿ ಆದೇಶ ಪಡೆದು ದೂರು ದಾಖಲಿಸಲಾಗಿತ್ತು. ಆರೋಪಿಗಳ ಬಗ್ಗೆ ಮಾಹಿತಿ ಪಡೆಯಲು ಸೈಬರ್ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News