ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ಲೋಪದ ಆರೋಪ: ದೂರು

Update: 2023-07-05 06:39 GMT

ಕೊಪ್ಪಳ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ದೋಷವಿದೆ ಎಂದು ಆರೋಪಿಸಿ ಅನಂತಪುರದ ಗಣಿ ಉದ್ಯಮಿ ಶ್ಯಾಂ ಪ್ರಸಾದ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಹೀಗಾಗಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಚುನಾವಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.  

'ರೆಡ್ಡಿ ಸಲ್ಲಿಸಿದ ನಾಮಪತ್ರದಲ್ಲಿ ಸಾಕಷ್ಟು ಲೋಪದೋಷಗಳು ಇವೆ. ಆಸ್ತಿ ವಿವರದಲ್ಲಿ ವಾಹನಗಳ ಬಗ್ಗೆ ಉಲ್ಲೇಖಿಸಿಲ್ಲ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಉದ್ಯಮಿ ಶ್ಯಾಂ ಪ್ರಸಾದ್ ಆಗ್ರಹಿಸಿದ್ದಾರೆ.

 ಜನಾರ್ದನ ರೆಡ್ಡಿ ಇತ್ತೀಚೆಗೆ ನಡೆದ ವಿಧಾನ ಸಭಾ ಚುನಾವನೆಯಲ್ಲಿ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News