ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪ | ಕೋಲಾರ ಶಾಸಕ ಕೊತ್ತೂರು ಮಂಜುನಾಥ್‌ಗೆ ಸಂಕಷ್ಟ
Update: 2024-12-12 10:16 GMT
ಬೆಂಗಳೂರು : ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ಗೆ ಸಂಕಷ್ಟ ಎದುರಾಗಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
2018ರಲ್ಲಿ ಮಂಜುನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದ ಹೈಕೋರ್ಟ್, ನಂತರ ಪೋರ್ಜರಿ, ವಂಚನೆ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 2018 ರಲ್ಲಿ ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶೀಘ್ರ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ.