ಪಕ್ಷ ವಿರೋಧಿ ಚಟುವಟಿಕೆ ಆರೋಪ: ಮಾಜಿ ಶಾಸಕ ವಾಸು ಅವರಿಗೆ ಕಾಂಗ್ರೆಸ್ ಶಿಸ್ತುಪಾಲನ ಸಮಿತಿಯಿಂದ ನೋಟಿಸ್

Update: 2023-07-21 15:05 GMT
  • ವಾಸು-ಮಾಜಿ ಶಾಸಕ 

ಮೈಸೂರು,ಜು.21: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಮಾಜಿ ಶಾಸಕ ವಾಸು ಅವರಿಗೆ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ನೋಟಿಸ್ ನೀಡಿದೆ. 

ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರು ಪತ್ರ ಬರೆದಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೀರಿ. ಚಾಮರಾಜ ಕ್ಷೇತ್ರ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದೀರಿ. ಈ ಬಗ್ಗೆ ಕೆಪಿಸಿಸಿಗೆ ಲಿಖಿತ ಪತ್ರ ಬಂದಿದೆ. ನಿಮಗೆ ಪತ್ರ ಬಂದ 7 ದಿನಗಳ ಒಳಗೆ ಲಿಖಿತ ವಿವರಣೆ ಕೊಡಿ ಎಂದು ಸೂಚನೆ ನೀಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News