ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ಚಟುವಟಿಕೆ ಆರೋಪ: ಮಹಿಳೆಯ ಬಂಧನ

Update: 2023-07-11 15:16 GMT

ಸಾಂದರ್ಭಿಕ ಚಿತ್ರ (ಸೊರ್ಸ್: PTI)

ದಾವಣಗೆರೆ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಪಿಜೆ ಬಡಾವಣೆ 3ನೇ ಮೇನ್‌ನಲ್ಲಿರುವ ಕೆಸಿ ಮೆಮೋರಿಯಲ್ ಆಸ್ಪತ್ರೆ ಪಕ್ಕದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.

ಹೆಣ್ಣು ಮಕ್ಕಳಿಗೆ ಹಣದ ಆಮಿಷ ಒಡ್ಡಿ ಬೇರೆ ಕಡೆಯಿಂದ ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ನಗರ ಉಪವಿಭಾಗ ಪೊಲೀಸ್ ಉಪಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಐ, ಮಹಿಳಾ ಪೊಲೀಸ್ ಠಾಣೆ ಮತ್ತು ಬಡಾವಣೆ ಠಾಣೆ ಪಿಎಸ್‌ಐಗಳು ಮತ್ತು ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿದೆ. ಈ ವೇಳೆ ಕೆಸಿ ಮೆಮೋರಿಯಲ್ ಆಸ್ಪತ್ರೆ ಪಕ್ಕದ ಕಟ್ಟಡದ 2ನೇ ಮಹಡಿಯಲ್ಲಿರುವ ಮನೆಯನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವುದು ಕಂಡು ಬಂದಿದೆ.

ಪ್ರಕರಣ ಸಂಬಂಧ ಮಹಿಳೆಯನ್ನು ಬಂಧಿಸಿದ್ದು, 35,100 ರೂ. ನಗದು ವಶಕ್ಕೆ ಪಡೆಯಲಾಗಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News