ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪ: ರಾಮಲಿಂಗಾರೆಡ್ಡಿ ವಿರುದ್ಧ ಜಾಮೀನು ರಹಿತ ವಾರಂಟ್

Update: 2024-02-10 16:44 GMT

ಬೆಂಗಳೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ  ಮೇಕೆದಾಟು ಪಾದಯಾತ್ರೆ ನಡೆಸಿದ ಆರೋಪದಲ್ಲಿ  ದಾಖಲಾಗಿದ್ದ ಪ್ರಕರಣ ಸಂಬಂಧ  ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನಗರದ 42 ನೇ ಎಸಿಎಂಎಂ ನ್ಯಾಯಾಲಯ ಈ ವಾರೆಂಟ್ ಜಾರಿ ಮಾಡಿ ವಿಚರಣೆ ಮುಂದೂಡಿದೆ.

ಪ್ರಕರಣ ಕುರಿತಂತೆ ಈವರೆಗೂ ಹಲವು ಬಾರಿ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡ ಆದೇಶಿಸಿದ್ದು ವಿಚಾರಣೆಯನ್ನು ಮಾರ್ಚ್ 11 ಕ್ಕೆ ಮುಂದೂಡಿದೆ.

ಪ್ರಕರಣದವೇನು?

ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತವಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ, ರಾಮಲಿಂಗಾರೆಡ್ಡಿ‌ ಸೇರಿದಂತೆ ಹಲವು ಮುಖಂಡರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಕೊರೋನಾ ನಿಯಮಗಳನ್ನು ಉಲ್ಲಂಘನೆ ಆರೋಪದಲ್ಲಿ ವಿಪ್ಪತ್ತು ನಿರ್ವಹಣಾ ಕಾಯಿದೆಯಡಿ ನಗರದ  ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.

ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಆರೋಪ ರಾಮಲಿಂಗಾರೆಡ್ಡಿ ವಿರುದ್ಧ ಆರೋಪ  ಪಟ್ಟಿ ಸಲ್ಲಿಸಿದ್ದರು. ಈ ಸಂಬಂಧ ಸಮನ್ಸ್ ಜಾರಿಯಾಗಿದ್ದರೂ ರಾಮಲಿಂಗಾರೆಡ್ಡಿ ಹಾಜರಾಗಿರಲಿಲ್ಲ. ಆದ್ದರಿಂದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News