ಸರಕಾರದ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಸುತ್ತೋಲೆ

Update: 2024-07-08 14:45 GMT

ಸಾಂದರ್ಭಿಕ ಚಿತ್ರ 

ಬೆಂಗಳೂರು: ಗಣರಾಜ್ಯೋತ್ಸವ ದಿನ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆಯ ದಿನದಂದು ರಾಜ್ಯದ ಎಲ್ಲ ಸರಕಾರಿ ಕಚೇರಿಗಳು, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರಕಾರಿ ಸಮಾರಂಭಗಳಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.

ಸೋಮವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಶಿಷ್ಟಾಚಾರ)ಯ ಸರಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಎಚ್.ಬಿ. ಸುತ್ತೋಲೆ ಹೊರಡಿಸಿದ್ದು, ‘ಜನವರಿ 26ರ ಗಣರಾಜ್ಯೋತ್ಸವ ಹಾಗೂ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಗಾಂಧೀಯವರ ಭಾವಚಿತ್ರದೊಂದಿಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು’ ಎಂದು ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News