ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

Update: 2024-02-11 10:18 GMT

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದರು. 

"ಅಮಿತ್ ಶಾ ಅವರು ಐದು ತಿಂಗಳಾದರೂ ಈವರೆಗೆ ಬರಗಾಲದ ಬಗ್ಗೆ ಒಂದು ಸಭೆಯನ್ನೂ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು.  ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ನರೇಗಾ ಯೋಜನೆಯಡಿ  150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಈವರೆಗೆ ಹೆಚ್ಚಿಸಿಲ್ಲ ಎಂದರು. 

ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು

ನಿರ್ಮಲಾ ಸೀತಾರಾಮನ್  ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗ ಅವರು ಅವರ ಜೊತೆ ಸೇರಿದ್ದಾರೆ. ಬಿಜೆಪಿಯೊಂದಿಗೆ  ಮೈತ್ರಿ ಮಾಡಿಕೊಂಡಿದ್ದಾರೆ  ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News