ಫೆಲೆಸ್ತೀನ್ ಪರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲು

Update: 2023-10-17 21:20 IST
ಫೆಲೆಸ್ತೀನ್ ಪರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಚಿತ್ರ

  • whatsapp icon

ಬೆಂಗಳೂರು, ಅ.17: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ನಗರದ ಎಂಜಿ ರಸ್ತೆಯಲ್ಲಿ ಸೋಮವಾರ ಸಂಜೆ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಿದ ಹಲವರ ವಿರುದ್ಧ ಇಲ್ಲಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ನಡೆಸುವ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದಿಲ್ಲ. ಅನುಮತಿ ಪಡೆಯದೇ ಏಕಾಏಕಿ ಪ್ರತಿಭಟನೆ ನಡೆಸಿರುವ ಹಿನ್ನೆಲೆ ಸಂಘಟನೆ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆಗೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪ್ಯಾಲೆಸ್ತೀನ್ ಮೇಲೆ ನಡೆಸುತ್ತಿರುವ ಇಸ್ರೇಲ್ ದಾಳಿಯನ್ನು ಭಾರತ ಖಂಡಿಸಬೇಕೆಂದು ವಿರೋಧಿಸಿ ಫೆಲೆಸ್ತೀನ್ ಪರವಾಗಿ ಪ್ರತಿಭಟನೆ ನಡೆಸಿ ಘೊಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. 25 ಜನರನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದರು.

ವಾಟ್ಸಪ್ ಮೂಲಕ ಮೆಸೇಜ್ ರವಾನಿಸಿ ಜನ ಸೇರಿದ್ದಾರೆ. ಹೀಗೆ ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಜನ ಸೇರಿದ್ದು ಮತ್ತು ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು. 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News