ಸಂವಿಧಾನದ ಬಗ್ಗೆ ಕೀಳಾಗಿ ಮಾತಾಡುವ ಸಂಸದ ಅನಂತ್ ಕುಮಾರ್‌ ರನ್ನು ಪಕ್ಷದಿಂದ ಹೊರಹಾಕಲಿ:‌ ಗೃಹ ಸಚಿವ ಡಾ.‌ಜಿ.ಪರಮೇಶ್ವರ್

Update: 2024-03-11 06:45 GMT

ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುತ್ತಿರುವ ಸಂಸದ ಅನಂತಕುಮಾರ್ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ. ಪಕ್ಷಕ್ಕೆ ಮುಜುಗರ ತರುವ ಮಾತುಗಳನ್ನು ಆಡಿದರೆ ಸರಿಪಡಿಸಬೇಕು. ಆದರೆ, ಸಂಸದ ಅನಂತಕುಮಾರ್ ಅವರ ಹೇಳಿಕೆಯಿಂದ ದೂರ ಇದ್ದೀವಿ ಎಂದು ಹೇಳಿದರೆ ಸಾಲುವುದಿಲ್ಲ. ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು ಎಂದರು.

"ಅಂಬೇಡ್ಕರ್ ಅವರನ್ನು ಮುಕ್ತ ಕಂಠದಿಂದ ಹೊಗಳಿದ ಪ್ರಧಾನಿ ಮೋದಿಯವರು,ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇ ಪದೇ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ" ಎಂದು ಹೇಳಿದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು.‌ ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ತನಗೆ ಟಿಕೆಟ್ ಬೇಡ, ಮಗನಿಗೆ ನೀಡುವಂತೆ ಮಹದೇವಪ್ಪ ಅವರು ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.

‌ 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News