ಅನಂತಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Update: 2024-01-15 10:23 GMT

ಅನಂತ ಕುಮಾರ್ ಹೆಗಡೆ, ಡಿ.ಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಮಾನಸಿಕ ಸ್ಥಿರತೆ ಇರುವವರು ಈ ರೀತಿ ಮಾತನಾಡಲು ಹೋಗಲ್ಲ. ಅನಂತ ಕುಮಾರ್ ಅರೋಗ್ಯದ ಬಗ್ಗೆ ಅವರ ಮುಖಂಡರೇ ಕಾಳಜಿ ವಹಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದರು.

ಇಂದು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ.  ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ" ಎಂದು ತಿಳಿಸಿದರು.

ಶೀಘ್ರ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ:

ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, "ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News